ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಲೋಕೇಶ ಜಗಲಸರ್ ಧಾರವಾಡ ಜಿಲ್ಲೆಯ ನೂತನ SP

ಧಾರವಾಡ: ರಾಜ್ಯ ಸರ್ಕಾರ 16 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಇದರಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಕೂಡ ವರ್ಗಾವಣೆಯಾಗಿದ್ದು, ಅವರ ಜಾಗಕ್ಕೆ ನೂತನ ಪೊಲೀಸ್ ವರಿಷ್ಠಾಧಿಕಾರಿಯನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಪಿ.ಕೃಷ್ಣಕಾಂತ ಅವರನ್ನು ಬೆಂಗಳೂರಿನ ಸೌತ್ ಡಿವಿಸನ್ ಗೆ ಡೆಪ್ಯುಟಿ ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಲಾಗಿದೆ. ಇವರಿಂದ ತೆರವಾದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ 2015ನೇ ಬ್ಯಾಚಿನ ಐಪಿಎಸ್ ಅಧಿಕಾರಿ ಲೋಕೇಶ ಜಗಲಸರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Edited By : Nirmala Aralikatti
Kshetra Samachara

Kshetra Samachara

27/06/2022 01:53 pm

Cinque Terre

16.38 K

Cinque Terre

0

ಸಂಬಂಧಿತ ಸುದ್ದಿ