ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗೃಹ ಇಲಾಖೆ ನಿರ್ದೇಶನದ ಮೇರೆಗೆ ಕಮಿಷನರೇಟ್ ಅಭಿಯಾನ: ERSS 112 ಸಂವಹನ ಬಗ್ಗೆ ಮಾಹಿತಿ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕ್ರೈಂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಸಾರ್ವಜನಿಕ ಜಾಗೃತಿ ಹಾಗೂ ಸಾರ್ವಜನಿಕ ಸಹಭಾಗಿತ್ವದ ಬಗ್ಗೆ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಮುಂದಾಗಿದೆ.

ಹೌದು.ಹು-ಧಾ ಕಮಿಷನರೇಟ್‌ನ ವೈರ್‌ಲೆಸ್ ವಿಭಾಗದ ಇನ್ಸ್ಪೆಕ್ಟರ್ ಮತ್ತು ಪಿಎಸ್ಐ ಅಧಿಕಾರಿಗಳ ನೇತೃತ್ವದಲ್ಲಿ ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ, ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರಿಗೆ ERSS 112 ಸಹಾಯವಾಣಿ ಸ್ಪಂದನ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿ, ತುರ್ತು ಸಂದರ್ಭಗಳಲ್ಲಿ ಮತ್ತು ಯಾವುದೇ ರೀತಿಯ ಸಹಾಯಕ್ಕಾಗಿ ಕೂಡ ಸಂವಹನ ನಡೆಸುವ ಬಗ್ಗೆ ಮಾಹಿತಿ ನೀಡಿದರು.

ಈಗಾಗಲೇ ERSS 112 ಬಗ್ಗೆ ಸಾರ್ವಜನಿಕರಿಗೆ ಸಾಕಷ್ಟು ಮಾಹಿತಿ ಕೊರತೆ ಹಿನ್ನೆಲೆಯಲ್ಲಿ ಈಗ ಗೃಹ ಇಲಾಖೆ ನಿರ್ದೇಶನದ ಮೇರೆಗೆ ಪೊಲೀಸ್ ಕಮೀಷನರೇಟ್ ವಿನೂತನ ನಿರ್ಧಾರಕ್ಕೆ ಮುಂದಾಗಿದೆ.

Edited By :
Kshetra Samachara

Kshetra Samachara

09/07/2022 01:09 pm

Cinque Terre

21.67 K

Cinque Terre

0

ಸಂಬಂಧಿತ ಸುದ್ದಿ