ಹುಬ್ಬಳ್ಳಿ: ಜನನ, ಮರಣ ನೋಂದಣಿಗೆ ಸಂಬಂಧಿಸಿದ ಪ್ರಕರಣಗಳನ್ನು ಉಪವಿಭಾಗಾಧಿಕಾರಿಗಳಿಗೆ ವರ್ಗಾಯಿಸಿರುವ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿ ವಕೀಲರ ಸಂಘದ ವತಿಯಿಂದ ಇಲ್ಲಿನ ತಿಮ್ಮಸಾಗರದ ಕೋರ್ಟ್ ಆವರಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಈಗಾಗಲೇ ಅಧಿಕಾರ ಹೊಂದಿರುವ ನ್ಯಾಯಾಂಗದ ದಂಡಾಧಿಕಾರಿಗಳನ್ನು ಮೊಟಕುಗೊಳಿಸಿ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿಗೆ ಅಧಿಕಾರ ನೀಡುವ ತಿದ್ದುಪಡಿಯನ್ನು ಸರ್ಕಾರ ಮಾಡಿದೆ. ಇದರಿಂದ ಜನರಿಗೆ ತ್ವರಿತವಾಗಿ ನ್ಯಾಯ ಸಿಗದೆ ಅನಾನುಕೂಲವಾಗುತ್ತದೆ. ಹೀಗಾಗಿ ಸರ್ಕಾರ ಈ ಕೂಡಲೇ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ವಕೀಲರು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು.
Kshetra Samachara
26/07/2022 11:22 am