ಧಾರವಾಡ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೊಟ್ಟೆ ಎಸೆದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರ ಸುಟ್ಟ ಪ್ರಕರಣ ದಿನಕ್ಕೊಂದು ರೂಪ ಪಡೆದುಕೊಳ್ಳುತ್ತಿದೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿ ವೀರ ಸಾವರ್ಕರ್ ಭಾವಚಿತ್ರ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾವಚಿತ್ರ ಸುಟ್ಟ ಜಾಗವನ್ನು ಧಾರವಾಡ ಉಪನಗರ ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು.
ಪ್ರತಿಭಟನೆ ಬಳಿಕ ಡಿಸಿ ಕಚೇರಿ ಮುಂಭಾಗದಲ್ಲಿ ಸುಟ್ಟ ಭಾವಚಿತ್ರವನ್ನು ಒಂದು ಕಡೆ ಕಸದಲ್ಲಿ ಹಾಕಲಾಲಾಗಿತ್ತು. ಸುಟ್ಟ ವೀರ ಸಾವರ್ಕರ್ ಭಾವಚಿತ್ರವನ್ನು ಮತ್ತು ಗೃಹ ಸಚಿವರಿಗೆ ಬರೆದ ಪೋಸ್ಟರ್‌ನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಕಾಂಗ್ರೆಸ್ ಪ್ರತಿಭಟನೆ ವೇಳೆ ಸಾವರ್ಕರ್ ಭಾವಚಿತ್ರ ಸುಡಲಾಗಿತ್ತು. ಈ ಹಿನ್ನೆಲೆ ಹಿಂದೂ ಪರ ಸಂಘಟನೆಗಳಿಂದ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ 12 ಜನ ಕಾಂಗ್ರೆಸ್ ಮುಖಂಡರ ಮೇಲೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಹಿನ್ನೆಲೆ ವೀರ ಸಾವರ್ಕರ್ ಅವರ ಸುಟ್ಟ ಭಾವಚಿತ್ರಗಳನ್ನು ಸ್ಥಳದಿಂದ ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ.
Kshetra Samachara
22/08/2022 05:03 pm