ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ADGP ಅಲೋಕ್ ಕುಮಾರ್ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಹೌದು. ಗಣೇಶೋತ್ಸವ ಆಚರಣೆ ಹಿನ್ನೆಲೆ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಲು ಹಾಗೂ ವಿವಿಧ ಗಣೇಶೋತ್ಸವ ಮಂಡಳಿಗಳ ಸದಸ್ಯರ ಜತೆಯೂ ಸಭೆ ನಡೆಸಲು ಮುಂದಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ನಿರ್ಧಾರ ಕೈಗೊಂಡಿದ್ದಾರೆ. ಗಣೇಶೋತ್ಸವದ ಭದ್ರತೆಗೆ ಹಲವು ಸೂಚನೆ ನೀಡುವ ಸಾಧ್ಯತೆ ಇದ್ದು, ಬಂದೋಬಸ್ತ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿರುವ ADGP ಅಲೋಕ್ ಕುಮಾರ್, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕ್ಕೆ ಸೂಚನೆ ನೀಡಲಿದ್ದಾರೆ. ಸಭೆಯ ಬಳಿಕ ಬೆಳಗಾವಿ ಜಿಲ್ಲೆಗೆ ಪ್ರವಾಸ ಬೆಳೆಸಲಿದ್ದಾರೆ.
Kshetra Samachara
29/08/2022 11:16 am