ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ಹಿನ್ನೆಲೆಯಲ್ಲಿ ಡಿಜೆಗೆ ಹಾಗೂ ಅಬ್ಬರದ ಧ್ವನಿವರ್ಧಕ ಬಳಕೆಯ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಧಾರ ಕೈಗೊಂಡಿದೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಡಿಜೆ ಬಳಸಬೇಕು. ಆದೇಶ ಮೀರಿದರೇ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕಕುಮಾರ್ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಗಣೇಶೋತ್ಸವ ಆಚರಣೆ ಬಗ್ಗೆ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಸಾಕಷ್ಟು ನಿರ್ಧಾರವನ್ನು ಕೈಗೊಂಡಿದ್ದು, ನಿಯಮ ಉಲ್ಲಂಘನೆ ಮಾಡಿದರೇ ಕಟ್ಟುನಿಟ್ಟಿನ ನಿಟ್ಟಿನಲ್ಲಿ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದರು.
ಈಗಾಗಲೇ ಸಾಕಷ್ಟು ನಿರ್ದೇಶನಗಳನ್ನು ನೀಡಿದ್ದು, ಯಾರೇ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದರು.
Kshetra Samachara
29/08/2022 05:46 pm