ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸುಳ್ಳದಲ್ಲಿ ಡಿಜೆ ಹಚ್ಚುವ ವಿಚಾರಕ್ಕೆ ವಾಗ್ವಾದ; ಪೊಲೀಸರನ್ನೇ ತಳ್ಳಾಡಿದ ಕಿಡಿಗೇಡಿಗಳು

ಹುಬ್ಬಳ್ಳಿ: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಹಚ್ಚುವ ವಿಚಾರಕ್ಕೆ ಕೆಲವು ಕಿಡಿಗೇಡಿಗಳು ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಲದೇ ಪೊಲೀಸರನ್ನೇ ತಳ್ಳಾಡಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಸುಳ್ಳ ಗ್ರಾಮದಲ್ಲಿ ನಡೆದಿದೆ.

ಸುಳ್ಳ ಗ್ರಾಮದಲ್ಲಿ ಸೋಮವಾರ ರಾತ್ರಿ ಸಾರ್ವಜನಿಕ ಗಣಪತಿಯನ್ನು ವಿಸರ್ಜನೆ ಮಾಡುವಾಗ ಡಿಜೆ ಹಚ್ಚಲಾಗಿತ್ತು. ರಾತ್ರಿ 11 ಗಂಟೆಯಾದರೂ ಕೂಡ ಡಿಜೆ ಬಂದ ಮಾಡದ ಹಿನ್ನೆಲೆಯಲ್ಲಿ ಪೊಲೀಸರು ಅನಿವಾರ್ಯವಾಗಿ ಡಿಜೆ ಬಂದ ಮಾಡಿಸಿದ್ದಾರೆ. ಇದರಿಂದಾಗಿ ಗ್ರಾಮದ ಕೆಲವು ಯುವಕರು ಪೊಲೀಸರ ಜೊತೆ ವಾಗ್ವಾದ ಮಾಡಿದ್ದಲದೇ ಪೊಲೀಸರನ್ನೇ ತಳ್ಳಾಡಿದ್ದಾರೆ. ಪರಿಣಾಮ ಗ್ರಾಮದಲ್ಲಿ ಸ್ವಲ್ಪ ಬಿಗುವಿನ ವಾತಾವರಣ ಕೂಡ ನಿರ್ಮಾಣವಾಗಿತ್ತು. ಕೂಡಲೇ ಗ್ರಾಮದ ಹಿರಿಯರು ಮಧ್ಯ ಪ್ರವೇಶಿಸಿ ಪೊಲೀಸರ ಜೊತೆ ವಾಗ್ವಾದ ಮಾಡಿದವರಿಗೆ ಬುದ್ಧಿ ಹೇಳಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Shivu K
Kshetra Samachara

Kshetra Samachara

13/09/2022 08:37 am

Cinque Terre

59.02 K

Cinque Terre

7

ಸಂಬಂಧಿತ ಸುದ್ದಿ