ಧಾರವಾಡ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆಂದು ಬೇರೆ ದೇಶದ ವೀಡಿಯೋಗಳನ್ನು ಹರಿಬಿಡಲಾಗುತ್ತಿದ್ದು, ಇದಕ್ಕೆ ಯಾರೂ ಕಿವಿಗೊಡಬಾರದು ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಮನವಿ ಮಾಡಿದ್ದಾರೆ.
ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಬೇರೆ ದೇಶದ ವೀಡಿಯೋಗಳನ್ನು ಹರಿಬಿಟ್ಟು ಮಕ್ಕಳ ಕಳ್ಳರು ಬಂದಿದ್ದಾರೆಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಕೆಲವರು ಅಮಾಯಕ ವ್ಯಕ್ತಿಗಳನ್ನು ಹಿಡಿದು ಅವರು ಮಕ್ಕಳ ಕಳ್ಳರೆಂದು ಭಾವಿಸಿ ಅವರನ್ನು ಥಳಿಸಿರುವ ಪ್ರಕರಣವೂ ಕಂಡು ಬಂದಿದೆ.
ಹಾಗೇನಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಅವರ ಮೇಲೆ ಹಲ್ಲೆ ಮಾಡುವಂತಹ ಕೆಲಸಕ್ಕೆ ಕೈ ಹಾಕಬಾರದು. ಹಾಗೇನಾದರೂ ಆದಲ್ಲಿ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಸ್‌ಪಿ ಅವರು ತಿಳಿಸಿದ್ದಾರೆ.
Kshetra Samachara
13/09/2022 10:35 pm