ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾರ್ವಜನಿಕರಿಂದ ದೂರು ಸ್ವೀಕರಿಸಲು ಮುಂದಾದ ಲೋಕಾಯುಕ್ತ ಪೊಲೀಸರು

ಧಾರವಾಡ: ಕರ್ನಾಟಕ ಲೋಕಾಯುಕ್ತರ ನಿರ್ದೇಶನದಂತೆ ಧಾರವಾಡ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಸೆಪ್ಟೆಂಬರ್ 21 ರಿಂದ 23 ರವರೆಗೆ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಸೆಪ್ಟೆಂಬರ್ 21 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಘಟಗಿ ಪಟ್ಟಣದ ತಾಲೂಕಾ ಪಂಚಾಯತ ಕಾರ್ಯಾಲಯದ ಸಭಾಭವನದಲ್ಲಿ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ಸ್ವೀಕರಿಸಲಾಗುವುದು. ಮತ್ತು ಸೆಪ್ಟೆಂಬರ್ 22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕುಂದಗೋಳ ಪಟ್ಟಣದ ತಾಲೂಕಾ ಪಂಚಾಯತ ಕಾರ್ಯಾಲಯದ ಸಭಾಭವನದಲ್ಲಿ, ಸೆಪ್ಟೆಂಬರ್ 23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನವಲಗುಂದ ಪಟ್ಟಣದ ತಾಲೂಕಾ ಪಂಚಾಯತ ಕಾರ್ಯಾಲಯದ ಸಭಾಭವನದಲ್ಲಿ ಮತ್ತು ಸೆಪ್ಟೆಂಬರ್ 23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿ ಪಟ್ಟಣದ ತಾಲೂಕಾ ಪಂಚಾಯತ ಕಾರ್ಯಾಲಯದ ಸಭಾಭವನದಲ್ಲಿ ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ಸ್ವೀಕರಿಸಲಾಗುವುದು.

ಯಾವುದೇ ಸರ್ಕಾರಿ ಅಧಿಕಾರಿ, ನೌಕರರು ಸರ್ಕಾರಿ ಸೇವೆ ಒದಗಿಸುವಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ದೂರು ನೀಡಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

19/09/2022 10:19 pm

Cinque Terre

13.09 K

Cinque Terre

0

ಸಂಬಂಧಿತ ಸುದ್ದಿ