ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: SDPI ದಾಳಿ ಹಿನ್ನೆಲೆ ಪ್ರತಿಭಟನೆ ಮಾಡಿದವರ ಮೇಲೆ ಕೇಸ್; 51 ಜನರ ಮೇಲೆ ಎಫ್ಐಆರ್

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಕಲ್ಲು ತೂರಾಟದ ಪ್ರಕರಣದಿಂದ ವಾಣಿಜ್ಯನಗರಿ ಹುಬ್ಬಳ್ಳಿಯ ಶಾಂತಿ ಹಾಳಾಗಿತ್ತು. ಪ್ರಕರಣ ಮಾಸುವ ಮುನ್ನವೇ ಎಸ್.ಡಿ.ಪಿ.ಐ ಹಾಗೂ ಪಿಎಫ್ಐ ದಾಳಿ ಖಂಡಿಸಿ ಪ್ರತಿಭಟನೆ ವಿಚಾರ ಈಗ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದ್ದು, ಪ್ರತಿಭಟನೆ ಮಾಡಿದ 51 ಜನರ ವಿರುದ್ಧ ಕೇಸ್ ದಾಖಲಾಗಿದೆ.

ಹೌದು.. ಹುಬ್ಬಳ್ಳಿ ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ 51 ಜನರ ವಿರುದ್ದ ಕೇಸ್ ದಾಖಲಾಗಿದ್ದು, ಕಮರಿಪೇಟೆ ಪೊಲೀಸ್ ಠಾಣೆಯ ಪಿ.ಎಸ್ ಐ ದೂರಿನನ್ವಯ ಕೇಸ್ ದಾಖಲಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ಕೌಲ್‌ಪೇಟೆ ಬಳಿ ಪ್ರತಿಭಟನೆ ಮಾಡಿದ್ದ ಕಾರ್ಯಕರ್ತರು, ಏಕಾಏಕಿ ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಪ್ರಕ್ಷುಬ್ಧ ವಾತಾವರಣ ಕೂಡ ನಿರ್ಮಾಣವಾಗಿತ್ತು. ಈ ನಿಟ್ಟಿನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಮಾಡಿದ್ದರು. ಆದರೆ ಪ್ರತಿಭಟನಾಕಾರರು ಸಾಕಷ್ಟು ಗಲಾಟೆ ಮಾಡಿದ್ದ ಬೆನ್ನಲ್ಲೇ ಪೊಲೀಸರು ಲಾಠಿ ಚಾರ್ಜ್ ಮೂಲಕ ಐವತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದು, ಈಗ 51 ಜನರ ವಿರುದ್ಧ ದೂರು ದಾಖಲಾಗಿದೆ.

ಇನ್ನೂ ದಾಳಿ ಖಂಡಿಸಿ ಪ್ರತಿಭಟನೆ ಮಾಡುವಾಗ ರಸ್ತೆ ಬಂದ್ ಮಾಡಿದ್ದ ಪ್ರತಿಭಟನಾಕಾರರು, ಪಿಎಫ್ಐ ಧ್ವಜ ಹಿಡಿದುಕೊಂಡು ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ್ದ ಎಸ್.ಡಿ.ಪಿ.ಐ ಪಿಎಫ್ಐ ಸಂಘಟನೆ ಕಾರ್ಯಕರ್ತರು, ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ತಳ್ಳಾಟ ನೂಕಾಟ ನಡೆಸಿದ್ದರು. ಅನುಮತಿ ಪಡೆಯದೇ ಪ್ರತಿಭಟನೆ ಮಾಡಿದ ಹಿನ್ನಲೆ 51 ಜನರ ವಿರುದ್ಧ ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಕಲಂ143,145,341,149 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/09/2022 11:29 am

Cinque Terre

53.2 K

Cinque Terre

4

ಸಂಬಂಧಿತ ಸುದ್ದಿ