ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಷ್ಟ್ರಪತಿ ಆಗಮನ ಹಿನ್ನೆಲೆ ಹೈ ಅಲರ್ಟ್: ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಹೌದು.. ಮಧ್ಯಾಹ್ನ 12.25 ಕ್ಕೆ ಹುಬ್ಬಳ್ಳಿಗೆ ಬಂದು ಇಳಿಯಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ವಿಶೇಷ ಟ್ರಾಫಿಕ್ ಕಾರ್ಯಾಚರಣೆ ಮೂಲಕ ಜಿಮ್ ಖಾನ್ ಮೈದಾನಕ್ಕೆ ಕರೆ ತರಲು ಬಿಗಿಯಾದ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಇನ್ನೂ ರಾಷ್ಟ್ರಪತಿ ಆಗಮನ ಹಿನ್ನೆಲೆ ನಗರದಾದ್ಯಂತ ಖಾಕಿ ಹೈ ಅಲರ್ಟ್ ಘೋಷಿಸಿದ್ದು, ವಿಮಾನ ನಿಲ್ದಾಣದ ಸುತ್ತಲೂ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಅಲ್ಲದೇ ವಿಮಾನ ನಿಲ್ದಾಣದ ಒಳಗೆ ಹೋಗುವ ಪ್ರಯಾಣಿಕರು ಹಾಗೂ ವಾಹನಗಳ ತಪಾಸಣೆ ಮಾಡುವ ಮೂಲಕ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

Edited By : Nagesh Gaonkar
Kshetra Samachara

Kshetra Samachara

26/09/2022 12:03 pm

Cinque Terre

41.06 K

Cinque Terre

0

ಸಂಬಂಧಿತ ಸುದ್ದಿ