ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಪೊಲೀಸ್ ಕಾರ್ಯಾಚರಣೆ ಮೂಲಕ ವಿವಿಧ ಠಾಣೆ ವ್ಯಾಪ್ತಿಯಲ್ಲಿ 10 ಜನ ಎಸ್‌ಡಿಪಿಐ ಕಾರ್ಯಕರ್ತರ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹೌದು. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿ ಅದರಗುಂಚಿ ಗ್ರಾಮದ ಅಬ್ಬಾಸಲಿ ಮಂಟಗಣಿಯನ್ನ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ರಮೇಶ ಗೋಕಾಕ್ ನೇತೃತ್ವದ ತಂಡವು ಬಂಧಿಸಿದೆ.
ಸಿಆರ್‌ಪಿಸಿ 107, 151 ಅಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದ ಪಿಎಫ್ಐ ಕಾರ್ಯಕರ್ತರ ಬಂಧಿಸಲು ಮುಂದಾಗಿದ್ದು, ಹಳೇ ಹುಬ್ಬಳ್ಳಿಯ ಕಸಬಾಪೇಟ್ ಮತ್ತು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ 9ಕ್ಕೂ ಹೆಚ್ಚು SDPI ಮತ್ತು PFI ಮುಖಂಡರು ಬಂಧಿಸಲಾಗಿದೆ.
ಇನ್ನು ಕಸಬಾಪೇಟ್ ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ಜನ ಅಂದರ್ ಆಗಿದ್ದು, ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಫಾರುಕ್ ಮತ್ತು ಸಿಕಂದರ್ ಪೊಲೀಸ್ ವಶಕ್ಕೆ ದೊರೆತಿದ್ದು, ಹೆಚ್ಚಿನ ವಿಚಾರಣೆಗೆ ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Kshetra Samachara
27/09/2022 09:32 am