ಹುಬ್ಬಳ್ಳಿ: ಕೇಂದ್ರ ಸರ್ಕಾರದಿಂದ ಪಿಎಫ್ಐ ಸಂಘಟನೆ ನಿರ್ಬಂಧ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಹು-ಧಾ ಪೊಲೀಸ್ ಕಮೀಷನರೇಟ್ ಹೆಚ್ಚಿನ ಭದ್ರತೆ ನಿಯೋಜನೆ ಮಾಡಿದೆ.
ಹೌದು.. ಹುಬ್ಬಳ್ಳಿಯಲ್ಲಿರುವ ಎಸ್.ಡಿ.ಪಿ.ಐ ಕಚೇರಿ ಮುಂಭಾಗ ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದ್ದು, ಹಳೇ ಹುಬ್ಬಳ್ಳಿ ಸಮೀಪ ಇರುವ ಎಸ್.ಡಿ.ಪಿ.ಐ ಕಚೇರಿ ಮುಂದೆ ಈಗಾಗಲೇ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿರುವ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ.
ಇನ್ನೂ ಹಳೇ ಹುಬ್ಬಳ್ಳಿ ಹಾಗೂ ಮತ್ತಿತರ ಕಡೆ ತೀವ್ರ ನಿಗಾ ವಹಿಸಿದ ಪೊಲೀಸ್ ಇಲಾಖೆ, ಆಯ ಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಿದೆ. ಪಿ.ಎಫ್.ಐ. ನಿಷೇಧದ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ. ಅಗತ್ಯ ಇರುವ ಕಡೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿದ್ದೇವೆ. ಅವಳಿ ನಗರದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಿದ್ದೇವೆ ಎಂದು ಪೊಲೀಸ್ ಆಯುಕ್ತ ಲಾಭುರಾಮ್ ಮಾಹಿತಿ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/09/2022 11:25 am