ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಿಎಫ್ಐ ಸಂಘಟನೆ ಬ್ಯಾನ್: ಧಾರವಾಡದಲ್ಲೂ ಪೊಲೀಸರಿಂದ ಕಟ್ಟೆಚ್ಚರ

ಧಾರವಾಡ: ದೇಶದಲ್ಲಿ ಐದು ವರ್ಷಗಳ ಕಾಲ ಪಿಎಫ್ಐ ಸೇರಿದಂತೆ ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದ ಹಿನ್ನೆಲೆಯಲ್ಲಿ ಧಾರವಾಡದಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಸಂಘಟನೆಯನ್ನು ಬ್ಯಾನ್ ಮಾಡಿದ ಹಿನ್ನೆಲೆಯಲ್ಲಿ ಪಿಎಫ್ಐ ಕಾರ್ಯಕರ್ತರು ದಾಂಧಲೆ ನಡೆಸಬಹುದಾದ ಸಾಧ್ಯತೆ ಇರುವುದರಿಂದ ರಾಜ್ಯ ಪೊಲೀಸ್ ಇಲಾಖೆ ಎಲ್ಲಾ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದೆ. ಅದೇ ರೀತಿ ಧಾರವಾಡದಲ್ಲೂ ಕರ್ನಾಟಕ ಸಶಸ್ತ್ರ ಮೀಸಲು ಪಡೆಯ ಪೊಲೀಸರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸುತ್ತ ಬಿಗಿ ಬಂದೋಬಸ್ತ್ ಮಾಡಿಕೊಂಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

28/09/2022 01:15 pm

Cinque Terre

22.18 K

Cinque Terre

0

ಸಂಬಂಧಿತ ಸುದ್ದಿ