ಧಾರವಾಡ: ಮಂಗಳವಾರ ಧಾರವಾಡ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗಿದೆ.
ಕಳೆದ ಎರಡು ದಿನಗಳಿಂದ ಹೊರಪು ನೀಡಿದ್ದ ಮಳೆರಾಯ ಇಂದು ಮತ್ತೆ ತನ್ನ ಅಟ್ಟಹಾಸ ಮೆರೆದಿದ್ದಾನೆ. ಮಂಗಳವಾರ ಮಧ್ಯಾಹ್ನದವರೆಗೂ ಬಿಸಿಲು ಹಾಗೂ ಸೆಕೆಯ ವಾತಾವರಣವಿತ್ತು. ಮಧ್ಯಾಹ್ನದ ನಂತರ ಆಕಾಶದಲ್ಲಿ ಕಪ್ಪಿಟ್ಟ ಮೋಡಗಳು ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಮಳೆ ಸುರಿಯುವಂತೆ ಮಾಡಿದವು.
ಗಾಳಿ ಹಾಗೂ ಗುಡುಗು, ಸಿಡಿಲಿನ ಮಧ್ಯೆ ಸುರಿದ ಮಳೆಯಿಂದಾಗಿ ನಗರದ ತಗ್ಗು ಪ್ರದೇಶದ ರಸ್ತೆಗಳು ಜಲಾವೃತಗೊಂಡಿದ್ದವು. ಧಾರವಾಡ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನೂ ನೀಡಿತ್ತು.
Kshetra Samachara
20/10/2020 06:08 pm