ಹುಬ್ಬಳ್ಳಿ: ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರ್ ಏಕಾಏಕಿ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿರುವ ಅಹಮದಾಬಾದ್ ಸಾರಿ ಸೆಂಟರ್ ಎದುರಿನಲ್ಲಿ ನಡೆದಿದೆ.
ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರು ಬಿಸಿಲಿನ ತಾಪಕ್ಕೆ ಏಕಾಏಕಿ ಶಾಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದ್ದು, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೂ ಪಾರ್ಕ್ ಮಾಡಿದ ಕಾರಿನಲ್ಲಿ ಮೊದಲು ಸಣ್ಣ ಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಸೂಕ್ತ ಕಾರ್ಯಾಚರಣೆ ಮೂಲಕ ಸಂಭವಿಸಬಹುದಾದ ದೊಡ್ಡಮಟ್ಟದ ಅಪಘಾತ ತಪ್ಪಿಸಿದ್ದಾರೆ.
Kshetra Samachara
04/05/2022 04:29 pm