ಕುಂದಗೋಳ : ಎಡೆಬಿಡದೆ ಸುರಿಯುತ್ತಿರುವ ಮಳೆಯ ಹೊಡೆತಕ್ಕೆ ಮನೆಯೊಂದು ಕುಸಿದು ಬಿದ್ದು ವೃದ್ಧೆಯೊಬ್ಬರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಯಲಿವಾಳ ಗ್ರಾಮದ ಕುಬೇರಗೌಡ ಗುರನಗೌಡ ಹಿರೇಗೌಡ್ರ ಎಂಬುವವರ ಮನೆ ಗೋಡೆ ಮನೆಯಲ್ಲಿದ್ದ ಕಾಶವ್ವ ಹಿರೇಗೌಡ್ರ ಎಂಬುವವರ ಮೇಲೆ ಕುಸಿದು ಬಿದ್ದಿದ್ದು, ತಕ್ಷಣ ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಂ ಬೆಳಿಗ್ಗೆ 5 ಗಂಟೆಗೆ ಮನೆ ಕುಸಿದು ಬಿದ್ದಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಹಾಗೂ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಹಶೀಲ್ದಾರ ಹಾಗೂ ಶಾಸಕಿ ಕುಸುಮಾವತಿ ಶಿವಳ್ಳಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಭೇಟಿ ವೃದ್ಧೆಯ ಆರೋಗ್ಯ ವಿಚಾರಿಸಿದ್ದಾರೆ.
Kshetra Samachara
12/07/2022 08:45 pm