ಕಲಘಟಗಿ:ಜಿಲ್ಲೆಯಲ್ಲಿ ಸುರಿಯುತ್ತಿರೋ ಸತತ ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದ ಪರಿಣಾಮ ಮನೆಯವರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕಾಡನಕೊಪ್ಪ ಗ್ರಾಮದ ಅಶೋಕ ಸಿದ್ದಪ್ಪ ಮಿಶ್ರಿಕೋಟಿ ಎಂಬುವರು ನಿನ್ನೆ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಏಕಾಏಕಿ ಮನೆ ಕುಸಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಕಲಘಟಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ತಾಲೂಕು ಆಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
Kshetra Samachara
07/08/2022 02:34 pm