ಅಣ್ಣಿಗೇರಿ: ತಾಲೂಕಿನ ಶಲವಡಿ ಗ್ರಾಮದಲ್ಲಿ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಸುತ್ತಮುತ್ತಲಿನ ಹಳ್ಳ ಭರ್ತಿಯಾಗಿ ಉಕ್ಕಿ ಹರಿಯುತ್ತಿವೆ. ತುಂಬಿದ ಹಳ್ಳದ ನೀರು ರೈತರ ಜಮೀನುಗಳಿಗೆ ನುಗ್ಗಿ ಬೆಳೆದ ಬೆಳೆಗಳು ಸರ್ವನಾಶವಾಗಿದೆ. ಹೆಸರು, ಮೆಣಸಿನ ಗಿಡ, ಬಿಟಿ ಹತ್ತಿ, ಉದ್ದು, ಶೇಂಗಾ ಸೇರಿದಂತೆ ಅನೇಕ ಬೆಳೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಸಾಲಸೂಲ ಮಾಡಿ ರೈತ ಕಷ್ಟಪಟ್ಟು ಬೆಳೆದ ಬೆಳೆ ಇನ್ನೇನು ಕೆಲವೇ ದಿನಗಳಲ್ಲಿ ಕೈಗೆ ಬರುತ್ತಿತ್ತು. ಆದರೆ ಈ ಮಳೆ-ಗಾಳಿಯಿಂದ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಇನ್ನು ಗ್ರಾಮಗಳಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೆಳೆಯನ್ನು ಪರಿಶೀಲಿಸಿ ಬೆಳೆ ಪರಿಹಾರ ಮತ್ತು ಬೆಳೆ ವಿಮೆಯನ್ನು ಶೀಘ್ರದಲ್ಲೇ ಕೊಡಬೇಕೆಂದು ರೈತರು ಒತ್ತಾಯ ಮಾಡುತ್ತಿದ್ದಾರೆ.
-ನಂದೀಶ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ
Kshetra Samachara
02/08/2022 02:03 pm