ಧಾರವಾಡ: ರಾಜ್ಯದಾದ್ಯಂತ ಸತತವಾಗಿ ಸುರಿದ ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಭಾರತಿಯ ಕಿಸಾನ್ ಸಂಘ-ಕರ್ನಾಟಕ ಸಂಘಟನೆಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಧಾರವಾಡದ ಡಿಸಿ ಕಚೇರಿ ಎದುರು ಜಮಾಯಿಸಿದ ನೂರಾರು ರೈತರು, ಜಿಲ್ಲಾಡಳಿತ ಶೀಘ್ರ ಬೆಳೆ ಸಮೀಕ್ಷೆ ಮಾಡಬೇಕು. ಅಲ್ಲದೇ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಮೆಕ್ಕೆಜೋಳ, ಸೋಯಾಬಿನ್, ವಠಾಣಿ ಮುಂತಾದ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಕೂಡಲೇ ಸರ್ಕಾರ ಹಾನಿಯಾದ ಪ್ರತಿ ಎಕರೆಗೆ ಕನಿಷ್ಠ 20 ಸಾವಿರ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
Kshetra Samachara
08/08/2022 02:19 pm