ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ ಬ್ರೇಕಿಂಗ್ ವಿಡಿಯೋ : ಅಮರಗೋಳದಲ್ಲಿ ಮಳೆಯಿಂದ ಉಕ್ಕಿಹರಿದ ಹಳ್ಳ, ಶಾಲೆಯಲ್ಲೇ ಸಿಲುಕಿದ ಮಕ್ಕಳು

ನವಲಗುಂದ: ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದಲ್ಲಿ ಸುರಿದ ಧಾರಾಕಾರ ಮಳೆಗೆ ಹಳ್ಳ ಉಕ್ಕಿ ಹರಿದಿದೆ. ಇದರಿಂದಾಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸುಮಾರು 150 ವಿದ್ಯಾರ್ಥಿಗಳು ಸಿಲುಕಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆ ಬೆಳವಟಗಿ ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಮಕ್ಕಳ ರಕ್ಷಣೆಗೆ ಮುಂದಾಗಿದ್ದಾರೆ.

ಗುರುವಾರ ಸಂಜೆ ಸುಮಾರು 4 ಗಂಟೆಯಿಂದ ಆರಂಭವಾದ ಮಳೆಗೆ ತಾಲ್ಲೂಕಿನ ಅಮರಗೋಳ ಗ್ರಾಮದ ಸಮೀಪ ಹಾದುಹೋಗುವ ಹಳ್ಳವೊಂದು ಉಕ್ಕಿ ಹರಿದಿದೆ. ಇದರಿಂದಾಗಿ ನೀರು ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಯ ಸುತ್ತಲು ಆವರಿಸಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳನ್ನು ಹೊರ ಬರದ ಹಾಗೆ ಸಿಬ್ಬಂದಿ ನೋಡಿಕೊಳ್ಳುತ್ತಿದ್ದು, ನೀರಿನ ಹರಿವು ಕಡಿಮೆಯಾದ ನಂತರ ವಿದ್ಯಾರ್ಥಿಗಳನ್ನು ಮನೆಗಳಿಗೆ ಕಳುಹಿಸಲಾಗುವುದು, ಅಲ್ಲಿಯವರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಶಾಲೆಯಲ್ಲಿಯೇ ಇರಿಸಲಾಗಿದೆ ಎಂದು ಬೆಳವಟಗಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ಹಂಪಿಹೊಳಿ ತಿಳಿಸಿದ್ದಾರೆ.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/06/2022 07:11 pm

Cinque Terre

95.69 K

Cinque Terre

2

ಸಂಬಂಧಿತ ಸುದ್ದಿ