ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಿರಂತರ ಮಳೆಗೆ ಮನೆ ಗೋಡೆ ಕುಸಿತ; ತಾಯಿ, ಮಕ್ಕಳಿಗೆ ಗಾಯ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ತಾಯಿ ಸೇರಿದಂತೆ ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ತಡಕೋಡ ಗ್ರಾಮದಲ್ಲಿ ನಡೆದಿದೆ.

ತಡಕೋಡ ಗ್ರಾಮದ ಮೇಲಿನಮನಿ ಎಂಬುವವರ ಮನೆ ಗೋಡೆ ನಿನ್ನೆ ತಡರಾತ್ರಿ ಕುಸಿದು ಬಿದ್ದಿದೆ. ರಾತ್ರಿ ಮನೆಯ ಸದಸ್ಯರು ಮಲಗಿದ್ದ ವೇಳೆ ಈ ಗೋಡೆ ಕುಸಿದು ಬಿದ್ದಿದ್ದರಿಂದ ಲಕ್ಷ್ಮೀ ಮೇಲಿನಮನಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನುಳಿದ ಮೂವರು ಮಕ್ಕಳಾದ ದಿವ್ಯಾ, ಶ್ರಾವಣಿ ಹಾಗೂ ಸಂಗೀತಾ ಎಂಬುವವರಿಗೆ ಗಾಯಗಳಾಗಿದ್ದು, ಅವರಿಗೆ ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತೀವ್ರವಾಗಿ ಗಾಯಗೊಂಡಿರುವ ಲಕ್ಷ್ಮೀ ಮೇಲಿನಮನಿ ಅವರಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಧಾರವಾಡ ಜಿಲ್ಲಾ ಆಸ್ಪತ್ರೆಗೆ ತಹಶೀಲ್ದಾರ ಸಂತೋಷ ಹಿರೇಮಠ, ಡಿಎಚ್ ಓ ಡಾ.ಕರಿಗೌಡರ ಸೇರಿದಂತೆ ಅನೇಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/09/2022 12:50 pm

Cinque Terre

87.37 K

Cinque Terre

1

ಸಂಬಂಧಿತ ಸುದ್ದಿ