ನವಲಗುಂದ: ಕರ್ನಾಟಕ ಅರಣ್ಯ ಇಲಾಖೆ, ಜಿಲ್ಲಾ ಪಂಚಾಯತ್ ಧಾರವಾಡ, ಸಾಮಾಜಿಕ ಅರಣ್ಯ ವಿಭಾಗ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ್ ನವಲಗುಂದ, ಸಾಮಾಜಿಕ ಅರಣ್ಯ ವಲಯ ಹಾಗೂ ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ "ಆಜಾದಿ ಕಾ ಅಮೃತ ಮಹೋತ್ಸವದ" ಅಂಗವಾಗಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನವಲಗುಂದ ಪಟ್ಟಣದ ತಾಲೂಕಾ ದಂಡಾಧಿಕಾರಿಗಳ ಕಚೇರಿಯ ಆವರಣದಲ್ಲಿ ತಹಶೀಲ್ದಾರ್ ಅನಿಲ ಬಡಿಗೇರ ಅವರ ನೇತೃತ್ವದಲ್ಲಿ ವಿವಿಧ ರೀತಿಯ 60 ಸಸಿಗಳನ್ನು ನೆಡಲಾಯಿತು.
ಈ ಸಂಧರ್ಭದಲ್ಲಿ ನವಲಗುಂದ ತಹಶೀಲ್ದಾರ ಅನಿಲ ಬಡಿಗೇರ, ಪುರಸಭೆ ಮುಖ್ಯಾಧಿಕಾರಿ ವೀರಪ್ಪ ಹಸಬಿ ಸೇರಿದಂತೆ ತಹಶೀಲ್ದಾರ ಕಾರ್ಯಾಲಯದಲ್ಲಿ ಕಂದಾಯ, ಅರಣ್ಯ, ಅಬಕಾರಿ, ಪುರಸಭೆ ಸಿಬ್ಬಂದಿ ಹಾಜರಿದ್ದರು.
Kshetra Samachara
05/06/2022 01:05 pm