ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮು-2022 ರ ಸಾಲಿನಲ್ಲಿ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಸೆಪ್ಟೆಂಬರ್ 07 ರಂದು ಮೊದಲನೇ ಹಂತವಾಗಿ 2049 ರೈತ ಫಲಾನುಭವಿಗಳಿಗೆ ಒಟ್ಟು 3 ಕೋಟಿ 91 ಲಕ್ಷ ರೂಪಾಯಿಗಳನ್ನು ನೇರವಾಗಿ ರೈತರ ಉಳಿತಾಯ ಖಾತೆಗಳಿಗೆ ಜಮಾ ಮಾಡಲಾಗಿದೆ.
ಪರಿಹಾರ ಎಂಟ್ರಿ ಕಾರ್ಯವು ಪ್ರಗತಿಯಲ್ಲಿದ್ದು ಹಂತ ಹಂತವಾಗಿ ರೈತರಿಗೆ ಪರಿಹಾರ ದೊರಕಲಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
15/09/2022 03:00 pm