ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿ ವರುಣನ‌‌ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್..

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ವರುಣನ‌‌ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಕಳೆದ ನಾಲ್ಕು ಗಂಟೆಯಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಮೇಲೆ ನೀರು ಹರಿಯುತ್ತಿದ್ದು,ಸಂಚಾರ ಸ್ಥಗಿತಗೊಂಡಿದೆ.

ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರ ಗಬ್ಬೂರು ಹಾಗೂ ಕುಂದಗೋಳ ಕ್ರಾಸ್ ಮೇಲೆ ನೀರು ಹರಿಯುತ್ತಿರುವದರಿಂದ ಮೂರು ಕಿಲೋ‌ಮೀಟರ್ ವರಗೆ ಟ್ರಾಫಿಕ್ ಜಾಮ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿವೆ. ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಧಾರವಾಡ ಜಿಲ್ಲೆಯ ‌ಕುಂದಗೋಳ, ಕಲಘಟಗಿ, ನವಲಗುಂದ ಹಾಗೂ ಹುಬ್ಬಳ್ಳಿ ತಾಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಅದಲ್ಲದೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ‌.

Edited By : Nagesh Gaonkar
Kshetra Samachara

Kshetra Samachara

05/10/2020 06:13 pm

Cinque Terre

36.01 K

Cinque Terre

1

ಸಂಬಂಧಿತ ಸುದ್ದಿ