ಹುಬ್ಬಳ್ಳಿ : ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಜಿಲ್ಲೆಯ ಜನರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕರೆ ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇತರ ಜಿಲ್ಲೆಗಳಿಗೆ ಹೋಲಿಸಿದಾಗ ಹುಬ್ಬಳ್ಳಿ-ಧಾರವಾಡದಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಹೀಗಾಗಿ ಎಲ್ಲರೂ ಶಾಂತಿಯುತವಾಗಿ ಭಕ್ತಿಪೂರ್ವಕವಾಗಿ ತಮ್ಮ ತಮ್ಮ ಕುಟುಂಬಗಳೊಂದಿಗೆ ಗಣೇಶೋತ್ಸವ ಆಚರಿಸೋಣ ಎಂದರು.
ಈಗಾಗಲೇ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಅಲ್ಲದೇ ಹಲವಾರು ಪೂರ್ವಭಾವಿ ಸಭೆಗಳನ್ನು ನಡೆಸಿದ್ದೇವೆ. ಗಣೇಶೋತ್ಸವ ಕುರಿತು ಅನುಮತಿಗಾಗಿ ಏಕಗವಾಕ್ಷಿ ಕೌಂಟರ್ ತೆರೆಯಲಾಗಿದೆ. ಇತರರಿಗೆ ತೊಂದರೆಯಾಗದಂತೆ ಹಬ್ಬ ಆಚರಿಸೋಣ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದರು.
ಬೆಣ್ಣೆಹಳ್ಳದ ವಿಷಯವಾಗಿ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸಚಿವರ ನೇತೃತ್ವದಲ್ಲಿ ಬೆಣ್ಣೆಹಳ್ಳ ಸಮಸ್ಯೆಗೆ ಶಾಶ್ವತ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಲಾಗಿದೆ. ನಿನ್ನೆ ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋದ ಯುವಕನ ಪತ್ತೆ ಕಾರ್ಯಾಚರಣೆ ಕೂಡಾ ಮುಂದುವರೆದಿದೆ. ಆದರೆ ಯುವಕನ ಸುಳಿವು ಮಾತ್ರ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ನಮ್ಮ ಕಾರ್ಯಾಚರಣೆ ಮುಂದುವರೆಯುತ್ತೆ ಎಂದರು.
ನಿನ್ನೆ ಒಟ್ಟು 29 ಜನರನ್ನು ರಕ್ಷಣಾ ಕಾರ್ಯ ಮಾಡಲಾಗಿದೆ. ಇದೀಗ ಎನ್‌ಡಿಆರ್ಎಫ್ ಅಗತ್ಯ ನಮಗಿಲ್ಲ. ನಮ್ಮ ಹತ್ತಿರ ಅಗತ್ಯ ತಂಡಗಳಿವೆ ಏನಾದರೂ ಇತರ ಕಡೆಗಳಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಸಹಾಯ ಕೇಳುವೆವು. ಮಳೆಯಿಂದ ಜಿಲ್ಲೆಯಲ್ಲಿ ಮನೆಗಳಿಗೆ ಹಾನಿಯಾಗಿದ್ದು, ಅಗತ್ಯವಾಗಿ ಪರಿಹಾರ ನೀಡಲು ಮುಂದಾಗುತ್ತೇವೆ ಎಂದು ಡಿಸಿ ಭರವಸೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/08/2022 10:27 pm