ಧಾರವಾಡ: ಮುಂಗಾರು ಮಳೆಯಿಂದಾಗಿ ಭರ್ತಿಯಾದ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಕೆರೆಗೆ ಶಾಸಕ ಅಮೃತ ದೇಸಾಯಿ ಅವರು ಬಾಗಿನ ಅರ್ಪಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್, ತೇಗೂರು ಡೊಮಗೆರೆ ಕೆರೆ ಅಭಿವೃದ್ಧಿ ಸಮಿತಿ ಹಾಗೂ ತೇಗೂರು ಗ್ರಾಮ ಪಂಚಾಯ್ತಿ ಸಹಯೋಗದಲ್ಲಿ ತೇಗೂರು ಗ್ರಾಮದ ಈ ಡೊಮಗೆರೆ ಕೆರೆಯನ್ನು ಅಭಿವೃದ್ಧಿಪಡಿಸಲಾಗಿದೆ.
ಬಾಗಿನ ಅರ್ಪಿಸಿದ ನಂತರ ಮಾತನಾಡಿದ ಶಾಸಕ ಅಮೃತ ದೇಸಾಯಿ, ಕೆರೆಗಳು ಗ್ರಾಮೀಣ ಜನರ ಜೀವನಾಡಿಗಳಾಗಿವೆ. ಕೆರೆಗಳನ್ನು ಸ್ವಚ್ಛ ಹಾಗೂ ಶುದ್ಧವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರತಿ ವರ್ಷ ಕೆರೆಯಲ್ಲಿ ತುಂಬುವ ಹೂಳನ್ನು ತೆಗೆಯುವ ಮೂಲಕ ಗ್ರಾಮಸ್ಥರೇ ರಕ್ಷಣೆ ಮಾಡಿಕೊಳ್ಳಬೇಕು. ಕೆರೆಗಳ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮಾಡುತ್ತಿರುವ ಸೇವಾ ಕಾರ್ಯ ಇತರ ಸಂಘ-ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸಪ್ಪ ಹುಲಮನಿ, ದುಗ್ಗೇಗೌಡ, ವಸಂತ ಅರ್ಕಾಚಾರ, ಮಡಿವಾಳಪ್ಪ ಬೆಳವಲದ, ಲೀಲಾವತಿ ಓಲೆಕಾರ ಸೇರಿದಂತೆ ಇತರರು ಈ ಸಂದರ್ಭದಲ್ಲಿದ್ದರು.
Kshetra Samachara
09/08/2021 06:12 pm