ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕವಲಗೇರಿಯಲ್ಲಿ ಮುಂದುವರಿದ ಚಿರತೆ ಕಾರ್ಯಾಚರಣೆ

ಧಾರವಾಡ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಕಾಣಿಸಿಕೊಂಡಿದೆ ಎನ್ನಲಾದ ಚಿರತೆಯನ್ನು ಸೆರೆಹಿಡಿಯುವುದಕ್ಕಾಗಿ ಅರಣ್ಯ ಇಲಾಖೆಯಿಂದ ನಿರಂತರವಾಗಿ ಕಾರ್ಯಾಚರಣೆ ನಡೆದಿದೆ.

ಕಬ್ಬೇನೂರು ಹಾಗೂ ಹಾರೋಬೆಳವಡಿ ಗ್ರಾಮದಲ್ಲೂ ಚಿರತೆ ಕಾಣಿಸಿಕೊಂಡಿದೆ ಎನ್ನಲಾಗಿತ್ತು. ಆದರೆ, ಇದೀಗ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಚಿರತೆ ಅವಿತು ಕುಳಿತಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಚಿರತೆ ಕಂಡು ಬಂದರೆ ಅದಕ್ಕೆ ಅರವಳಿಕೆ ಚುಚ್ಚುಮದ್ದು ನೀಡಲು ಶೂಟರ್‌ಗಳನ್ನೂ ಸ್ಥಳಕ್ಕೆ ಕರೆದುಕೊಂಡು ಬರಲಾಗಿದ್ದು, ರಾತ್ರಿವರೆಗೂ ಚಿರತೆ ಸೆರೆಹಿಡಿಯುವುದಕ್ಕಾಗಿ ಕಾರ್ಯಾಚರಣೆ ಮುಂದುವರೆದಿದೆ.

Edited By : Nagesh Gaonkar
Kshetra Samachara

Kshetra Samachara

22/09/2021 07:45 pm

Cinque Terre

67.12 K

Cinque Terre

8

ಸಂಬಂಧಿತ ಸುದ್ದಿ