ಧಾರವಾಡ: ಕಳೆದ ಕೆಲವು ದಿನಗಳಿಂದ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿರುವ ಚಿರತೆ ಇದುವರೆಗೂ ಅರಣ್ಯ ಇಲಾಖೆ ಸಿಬ್ಬಂದಿಗೆ ಸೆರೆ ಸಿಕ್ಕಿಲ್ಲ. ಕವಲಗೇರಿ ಹಾಗೂ ಗೋವನಕೊಪ್ಪದ ಸುತ್ತಮುತ್ತ ಸಂಚರಿಸುತ್ತಿರುವ ಚಿರತೆ ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ಓಡಾಡಿ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಓಡಾಡುತ್ತಿದೆ.
ಇಂದು ಕೂಡ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದ್ದು, ಅದನ್ನು ಸೆರೆಹಿಡಿಯುವುದಕ್ಕಾಗಿ ಅರಣ್ಯ ಇಲಾಖೆಯವರು ಸ್ಥಳದಲ್ಲೇ ಠಿಕಾಣೆ ಹೂಡಿದ್ದಾರೆ. ಅದನ್ನು ಸೆರೆಹಿಡಿಯುವವರೆಗೂ ಅಥವಾ ಕಾಡಿಗೆ ಅಟ್ಟುವವರೆಗೂ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಅರಣ್ಯ ಇಲಾಖೆಯವರು ತಿಳಿಸಿದ್ದಾರೆ.
Kshetra Samachara
25/09/2021 10:25 pm