ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನಾಗರಹಾವು ರಕ್ಷಣೆ ಮಾಡಿದ ಸ್ನೇಕ್ ಶಿವು:ಸಾರ್ವಜನಿಕರ ಆತಂಕ ದೂರ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಎಪಿಎಂಸಿ ಮಾರ್ಕೆಟ್ ನಲ್ಲಿರುವ ಕಿರಾಣಿ ಅಂಗಡಿಯಲ್ಲಿ ರಾತ್ರೋರಾತ್ರಿ ಕಾಣಿಸಿಕೊಂಡ ನಾಗರಹಾವೊಂದನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವ ಮೂಲಕ ಸ್ನೇಕ್ ಶಿವು ಜನರ ಆತಂಕ ದೂರ ಮಾಡಿದ್ದಾರೆ.

ಹೌದು..ರಾತ್ರಿ ವೇಳೆ ಕಿರಾಣಿ ಅಂಗಡಿಯಲ್ಲಿ ನಾಗರಹಾವು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಕೂಡಲೇ ಭೈರಿದೇವರಕೊಪ್ಪದ ಉರಗ ಪ್ರೇಮಿ ಸ್ನೇಕ್ ಶಿವುಗೆ ಕರೆ ಮಾಡಲಾಯಿತು. ಸ್ಥಳಕ್ಕೆ ದೌಡಾಯಿಸಿದ ಸ್ನೇಕ್ ಶಿವು ನಾಗರಹಾವನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

ಈಗಾಗಲೇ ಸಾಕಷ್ಟು ಹಾವುಗಳನ್ನು ರಕ್ಷಣೆ ಮಾಡುವ ಮೂಲಕ ಸ್ಮೇಕ್ ಶಿವು ಪ್ರಾಣಿ ಸಂರಕ್ಷಣೆ ಜವಾಬ್ದಾರಿಯನ್ನು ನಿಭಾಯಿಸುತ್ತಿರುವುದು ವಿಶೇಷವಾಗಿದೆ.

Edited By : Nagesh Gaonkar
Kshetra Samachara

Kshetra Samachara

18/11/2021 03:23 pm

Cinque Terre

26.55 K

Cinque Terre

8

ಸಂಬಂಧಿತ ಸುದ್ದಿ