ಧಾರವಾಡ: ಮುಂದಿನ 12 ರಿಂದ 14 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹವಾಮಾನ ಕೇಂದ್ರದ ಮುಖ್ಯಸ್ಥ ಡಾ.ಆರ್.ಎಚ್.ಪಾಟೀಲ ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಧಾರವಾಡ, ಹಾವೇರಿ, ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಇರಲಿದೆ. ಬಳ್ಳಾರಿ, ಕೊಪ್ಪಳ, ವಿಜಯನಗರ, ಬಾಗಲಕೋಟೆ, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಶನಿವಾರ ಮಧ್ಯಾಹ್ನದಿಂದ ರಾತ್ರಿವರೆಗೂ ಭಾರೀ ಮಳೆಯಾಗಲಿದೆ. ಕಲಬುರ್ಗಿ, ರಾಯಚೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದಾರೆ.
Kshetra Samachara
20/11/2021 03:42 pm