ಧಾರವಾಡ: ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದಲ್ಲಿ ಮಧ್ಯರಾತ್ರಿ ಮನೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಏಳು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಕ್ತುಂಬಿ ಚಿಮ್ಮನಕಟ್ಟಿ ಎಂಬುವವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಮೂರ್ನಾಲ್ಕು ದಿನ ಮಳೆ ಸುರಿದಿದ್ದರಿಂದ ಮಳೆಗೆ ಮನೆ ನೆನೆದಿತ್ತು. ನಿನ್ನೆ ಮಧ್ಯರಾತ್ರಿ ಕುಸಿದು ಬಿದ್ದಿದೆ. ಮಕ್ಕಳು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಏಳು ಜನ ಈ ಮನೆಯಲ್ಲಿ ವಾಸವಿದ್ದರು. ಮಲಗಿದ್ದ ವೇಳೆಯೇ ಮನೆ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸದ್ಯ ಮನೆ ಕಳೆದುಕೊಂಡಿರುವ ಈ ಕುಟುಂಬಕ್ಕೆ ಜಿಲ್ಲಾಡಳಿತ ಹಾಗೂ ಸರ್ಕಾರ ಸ್ಪಂದಿಸಿ ಪರಿಹಾರ ನೀಡಬೇಕಿದೆ.
Kshetra Samachara
24/11/2021 05:49 pm