ನವಲಗುಂದ : ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ ಆಗುತ್ತಲೇ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ವಿಷಯ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಧಾರವಾಡದಿಂದ ಬ್ಯಾಲ್ಯಾಳ ಗ್ರಾಮಕ್ಕೆ ಬಸ್ ನಲ್ಲಿ ತೆರಳುತ್ತಿದ್ದ ಶಿಕ್ಷಕಿವೊಬ್ಬರು ಗುಮ್ಮಗೋಳ ಹಾಗೂ ಬ್ಯಾಲ್ಯಾಳ ಮಾರ್ಗ ಮಧ್ಯದಲ್ಲಿ ಬರುವ ಮಾರೋಹಳ್ಳದ ಬಳಿ ಚಿರತೆಯನ್ನು ಕಂಡು ಗಾಬರಿಗೊಂಡು ಕೂಡಲೇ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ವಿಷಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮುಟ್ಟುತ್ತಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಹುಬ್ಬಳ್ಳಿ ಮತ್ತು ಧಾರವಾಡ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆದರೂ ಯಾವುದೇ ಕುರುಹುಗಳು ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.
Kshetra Samachara
18/03/2022 08:44 pm