ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪೊಲೀಸ್ ಕ್ವಾಟರ್ಸ್‌ಗೆ ನಾಗರಹಾವು ಕಾಣಿಸಿಕೊಂಡಿದೆ. ಹಾವನ್ನು ನೋಡಿ ಪೊಲೀಸ್ ಕುಟುಂಬಸ್ಥರು ಭಯಭೀತರಾಗಿ ಸ್ನೇಕ್ ನಾಗರಾಜ್‌ಗೆ ಅವರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ನಾಗರಾಜ್ ಮೂರು ಗಂಟೆಗಳ ಕಾಲ ಸತತವಾಗಿ ಹುಡುಕಾಟ ನಡೆಸಿ ಸುರಕ್ಷಿತವಾಗಿ ಹಾವನ್ನು ಹಿಡಿದು ಅರಣ್ಯಕ್ಕೆ ಬಿಟ್ಟು ಬಂದಿದ್ದಾರೆ.
ಇನ್ನು ಹಾವು ಕಂಡು ಆತಂಕದಲ್ಲಿದ್ದ ಕುಟುಂಬಸ್ಥರು ಸ್ನೇಕ್ ನಾಗರಾಜ ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
Kshetra Samachara
22/03/2022 09:12 am