ಧಾರವಾಡ: ಧಾರವಾಡ ತಾಲೂಕಿನಾದ್ಯಂತ ಭಾರೀ ಗಾಳಿ ಸಮೇತ ಮಳೆಯಾಗಿದ್ದು, ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ.
ದೊಡ್ಡ ಪ್ರಮಾಣದಲ್ಲಿ ಗಾಳಿ ಬೀಸಿದ್ದು, ಅಲ್ಲಲ್ಲಿ ಮರಗಳು ಸಹ ಧರೆಗುರುಳಿರುವ ಬಗ್ಗೆ ವರದಿಯಾಗಿದೆ. ಹೆಬ್ಬಳ್ಳಿ ಗ್ರಾಮದ ನಡು ಊರಿನಲ್ಲೇ ಇದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಮರ ಹೊತ್ತಿ ಉರಿಯುತ್ತಿದುದನ್ನು ಅಲ್ಲಿ ಗ್ರಾಮಸ್ಥರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
Kshetra Samachara
14/04/2022 10:13 pm