ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ, ಹರದಗಟ್ಟಿ, ಅಕ್ಕಿಗುಂದ, ಆದರಹಳ್ಳಿ ಮತ್ತು ಬಡ್ನಿ ಹಲವೆಡೆ ಶನಿವಾರ ಮಧ್ಯಾಹ್ನ ಧಾರಾಕಾರವಾಗಿ ಮಳೆ ಸುರಿದಿದ್ದು, ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ.
ಹೌದು.. ಲಕ್ಷ್ಮೇಶ್ವರ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಬಿಸಿಲಿನ ತಾಪಮಾನ ಪ್ರಮಾಣ ಹೆಚ್ಚಿತ್ತು. ಸಂಜೆ 2 ಗಂಟೆಯ ಸುಮಾರಿಗೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಸುತ್ತಮುತ್ತ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ.
ಇನ್ನೂ ಬಿರುಗಾಳಿಯಿಂದ ಕೆಲವೆಡೆಗಳಲ್ಲಿ ಮನೆಯ ಮೇಲ್ಚಾವಣಿಯಲ್ಲಿ ಹಾಕಿರುವ ತಗಡುಗಳು ಹಾರಿ ಹೋಗಿರುವ ಘಟನೆ ನಡೆದಿದ್ದು, ಲಕ್ಷ್ಮೇಶ್ವರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
Kshetra Samachara
16/04/2022 08:41 pm