ಧಾರವಾಡ: ಧಾರವಾಡದಲ್ಲಿ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶದ ರಸ್ತೆಗಳು ಜಲಾವೃತಗೊಂಡಿವೆ. ನಗರದ ಸುಭಾಷ ರಸ್ತೆ ಜಲಾವೃತಗೊಂಡಿದ್ದು, ಅದರ ಉಪರಸ್ತೆಗಳಲ್ಲಿ ನೀರು ಹರಿಯುತ್ತಿದೆ. ತಗ್ಗು ಪ್ರದೇಶದಲ್ಲಿರುವ ಅಂಗಡಿಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಠಿ ಮಾಡಿದೆ.
ಮಂಗಳವಾರ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇದ್ದರೂ ಸಂಜೆ ಇದ್ದಕ್ಕಿದ್ದಂತೆ ಭಾರೀ ಗಾಳಿಯೊಂದಿಗೆ ಮಳೆ ಸುರಿದು ಅವಾಂತರ ಸೃಷ್ಠಿಸಿದೆ. ಇದರಿಂದಾಗಿ ವಾಹನ ಸವಾರರು, ಸಾರ್ವಜನಿಕರು ಪರದಾಡುವಂತಾಯಿತು.
Kshetra Samachara
19/04/2022 11:04 pm