ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಅಕ್ಷರಶಃ ತತ್ತರಿಸಿ ಹೋಗಿದ್ದು, ವಿದ್ಯಾನಗರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ ಹಾನಿಯಾಗಿದ್ದು, ಸಂಭವಿಸಬಹುದಾದ ದೊಡ್ಡಮಟ್ಟದ ಅನಾಹುತ ತಪ್ಪಿದಂತಾಗಿದೆ.
ಹೌದು... ವಿದ್ಯಾನಗರದಲ್ಲಿ ಮಳೆಗೆ ವಿದ್ಯುತ್ ಕಂಬಕ್ಕೆ ತಗುಲಿದ ಮರಗಳಿಂದ ಕೆಲಕಾಲ ಕಂಪೌಂಡ್ ಹಾಗೂ ಮರಗಳಲ್ಲಿ ವಿದ್ಯುತ್ ಪ್ರವಹಿಸಿದ್ದು, ಜನರು ಆತಂಕಗೊಂಡಿದ್ದಾರೆ.
ಇನ್ನೂ ಧಾರಾಕಾರವಾಗಿ ಸುರಿದ ಮಳೆಗೆ ಮನೆಯ ಮೇಲ್ಚಾವಣಿ ಕುಸಿದಿದ್ದು, ಕೆಲವೊಂದು ಮನೆಗಳಲ್ಲಿ ನೀರು ತುಂಬಿಕೊಂಡಿದೆ. ಅಲ್ಲದೇ ಅಕಾಲಿಕ ಮಳೆಗೆ ಜನರು ಆತಂಕಗೊಂಡಿದ್ದಾರೆ.
ಹೆಸ್ಕಾಂ ಸಿಬ್ಬಂದಿಯ ನಿಷ್ಕಾಳಜಿಗೆ ಜನ ಹಿಡಿಶಾಪ ಹಾಕಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Kshetra Samachara
04/05/2022 08:00 pm