ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ರೋಟರಿ ಸ್ಕೂಲ್ ಗೇಟ್ ಬಳಿಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ.
ದೇಶಪಾಂಡೆ ನಗರದ ರೋಟರಿ ಸ್ಕೂಲ್ ಗೆ ಹೋಗುವ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ. ಇನ್ನು ದೇಶಪಾಂಡೆ ನಗರ ಪಕ್ಕದಲ್ಲೇ ಇರುವ ರೋಟರಿ ಸ್ಕೂಲ್ ಹತ್ತಿರ ಬೃಹತ್ ಮರಗಳು ರಸ್ತೆಗೆ ಉರುಳಿ ಬಿದ್ದಿರುವ ಪರಿಣಾಮ ರಸ್ತೆ ಸಂಪರ್ಕ ಬಂದ್ ಆಗಿದ್ದು, ಜನರು ಪರದಾಡುವಂತಾಗಿದೆ.
Kshetra Samachara
04/05/2022 10:55 pm