ಧಾರವಾಡ: ನೈಋತ್ಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದ್ದು, ಉತ್ತರದ ಕಡೆಗೆ ಚಲಿಸುತ್ತಿದೆ. ಮುಂದಿನ 72 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಮತ್ತು ಕರಾವಳಿಯಲ್ಲಿ ವ್ಯಾಪಾಕ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಬರುವ 48 ಗಂಟೆಗಳಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಲಘು ಮಳೆ ಮತ್ತು ಬಿರುಸಿನ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಳೆ ಮಾಪನಶಾಸ್ತ್ರ ವಿಭಾಗ ತಿಳಿಸಿದೆ.
ಅಲ್ಲದೇ ಸಿಡಿಲು, ಗುಡುಗು ಸಹಿತ ಮಳೆಯಾಗುವ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ರೈತರು ಹೊರಗೆ ಹೋಗದಂತೆ ಮತ್ತು ಪ್ರಾಣಿಗಳನ್ನು ಹೊರಗಡೆ ಬಿಡದಂತೆ ಸೂಚನೆ ಸಹ ನೀಡಿದೆ.
Kshetra Samachara
17/05/2022 08:16 pm