ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ರಾಜ್ಯವೇ ಅಕ್ಷರಶಃ ಆಂತಕದ ಸ್ಥಿತಿಯಲ್ಲಿದೆ. ಜಿಲ್ಲೆಯಲ್ಲಿ ಈಗಾಗಲೇ ಪ್ರವಾಹದ ಭೀತಿಯಲ್ಲಿರುವ ಜನರಿಗೆ ವರುಣನ ಅಬ್ಬರ ನಿಜಕ್ಕೂ ಮತ್ತೊಂದು ಚಿಂತೆಯನ್ನು ತಂದೊಡ್ಡಿದ್ದಾನೆ.
ಹೌದು. ಈಗಾಗಲೇ ಜಿಲ್ಲೆಯಾದ್ಯಂತ ಬಹುತೇಕ ಕಡೆಯಲ್ಲಿ ಕೆರೆ ಭರ್ತಿಯಾಗಿ ಕೋಡಿ ಹರಿದು, ಹೊಲ, ಮನೆಗಳಿಗೆ ನೀರು ನುಗ್ಗುತ್ತಿದೆ. ಮೊನ್ನೆ ರಾತ್ರಿಯಿಂದಲೂ ಸುರಿಯುತ್ತಿರುವ ಮಳೆಯಿಂದ ಹೊಲಗಳಲ್ಲಿನ ನೀರು ಮನೆಗಳಿಗೆ ನುಗ್ಗಿ ಹಾನಿ ಮಾಡುತ್ತಿದೆ. ಇನ್ನೂ ಜಿಲ್ಲೆಯ ಹಲವು ಗ್ರಾಮದಲ್ಲಿ ಹಲವಾರು ಮನೆಗಳ ಕುಸಿದಿದ್ದು, ಜನರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ವಾಣಿಜ್ಯನಗರಿಯಲ್ಲಿಯೂ ವರುಣನ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಮಳೆಯಿಂದ ಮನೆಗಳಿಗೆ ನೀರು ನುಗ್ಗಿರುವ ಪರಿಣಾಮ ಗಣೇಶನಗರದ ಜನರು ಪರದಾಡುವಂತಾಗಿದೆ. ರಾತ್ರಿ ಪೂರ್ತಿ ನಿದ್ದೆ ಮಾಡದೇ ನೀರನ್ನು ಹೊರ ಚೆಲ್ಲುವುದೇ ಒಂದು ಕೆಲಸವಾಗಿದೆ.
ಹುಬ್ಬಳ್ಳಿಯ ವಿದ್ಯಾನಗರಲ್ಲಿಯೂ ಮಳೆ ಅವಾಂತರ ಸೃಷ್ಟಿಸಿದ್ದು, ನೂರಾರು ಮನೆಗಳಿಗೆ ನೀರು ನುಗ್ಗಿದ್ದು, ರಾತ್ರಿಯಿಡೀ ನಿದ್ದೆ ಮಾಡದೆ ನೀರನ್ನು ಹೊರ ಹಾಕುವಂತಾಗಿದ್ದು, ಜನರು ಮತ್ತೊಮ್ಮೆ ಪ್ರವಾಹದ ಭೀತಿಯಲ್ಲಿಯೇ ಜೀವನ ನಡೆಸುವಂತಾಗಿದೆ.
Kshetra Samachara
20/05/2022 12:06 pm