ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದಲೇ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಇಂದು ಬೆಳ್ಳಂಬೆಳಿಗ್ಗೆಯೇ ಮಳೆ ಅಬ್ಬರಿಸುತ್ತಿದ್ದು, ಧಾರವಾಡ ತಾಲೂಕಿನ ಕೆಲ ಗ್ರಾಮಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ.
ನಿನ್ನೆ ರಾತ್ರಿ ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗಿತ್ತು. ಇಂದು ಬೆಳಗಿನ ಜಾವವೇ ಮಳೆ ಮತ್ತೇ ತನ್ನ ಅಬ್ಬರ ಮುಂದುವರೆಸಿದ್ದು, ಗ್ರಾಮಾಂತರ ಭಾಗದ ಕೆಲವೆಡೆ ಜನ, ಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ನುಗ್ಗಿದ ನೀರನ್ನು ಜನ ಹೊರ ಹಾಕಲು ಹರಸಾಹಸಪಡುತ್ತಿದ್ದಾರೆ.
Kshetra Samachara
30/08/2022 08:35 am