ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ :ಜಿಲ್ಲಾ ನ್ಯಾಯಾಲಯಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಭೇಟಿ

ಧಾರವಾಡ : ಅ. 12 ರಿಂದ ನ್ಯಾಯಾಲಯದ ಕಲಾಪಗಳು ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣದ ಮಾರ್ಗಸೂಚಿಗಳ ಅಳವಡಿಕೆಯನ್ನು ಪರಿಶೀಲಿಸಲು ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಅಭಯ ಶ್ರೀನಿವಾಸ ಓಕಾ ಅವರು ಇಂದು ನಗರದ ಜಿಲ್ಲಾ ನ್ಯಾಯಾಲಯ, ಸಿವಿಲ್ ನ್ಯಾಯಾಲಯ ಆವರಣ ಹಾಗೂ ವಕೀಲರ ಸಂಘಕ್ಕೆ ಭೇಟಿ ನೀಡಿದರು.

ನಿಬಂಧನೆಗೊಳಪಟ್ಟು ಪ್ರತಿನಿತ್ಯ ಐದು ಜನ ಸಾಕ್ಷಿಗಳ ವಿಚಾರಣೆ ಕೈಗೊಳ್ಳಲು ಅವಕಾಶವಿರುವುದರಿಂದ ಈ ಹಂತದಲ್ಲಿ ಕೋವಿಡ್ ನಿಯಂತ್ರಣದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು.

ಸಾಕ್ಷಿಗಳು, ಕಕ್ಷಿದಾರರು, ವಕೀಲರು, ಸಿಬ್ಬಂದಿ ವರ್ಗ ಎಲ್ಲರ ಆರೋಗ್ಯ ಮುಖ್ಯವಾಗಿರುವುದರಿಂದ ಮಾರ್ಗಸೂಚಿಯನುಸಾರ ನ್ಯಾಯಾಲಯದ ಪ್ರವೇಶ, ಪ್ರಕರಣ ದಾಖಲಿಸುವಿಕೆ, ವಿಚಾರಣೆ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಹೈಕೋರ್ಟ್‍ನ ಮಹಾವಿಲೇಖನಾಧಿಕಾರಿ ರಾಜೇಂದ್ರ ಬಾದಾಮಿಕರ್, ಧಾರವಾಡ ಪೀಠದ ನ್ಯಾಯಮೂರ್ತಿಗಳಾದ ನರೇಂದ್ರಕುಮಾರ್, ವಿ. ಶ್ರೀಶಾನಂದ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆರ್.ಎಸ್. ಚಿನ್ನಣ್ಣವರ,ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ, ಮಹಾನಗರ ಪಾಲಿಕೆ ಆಯುಕ್ತ ಡಾ: ಸುರೇಶ್ ಇಟ್ನಾಳ, ಉಪವಿಭಾಗಾಧಿಕಾರಿ ಡಾ: ಬಿ. ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ ಮತ್ತಿತರರ ಅಧಿಕಾರಿಗಳು, ನ್ಯಾಯಾಧೀಶರು ಇದ್ದರು.

Edited By : Nirmala Aralikatti
Kshetra Samachara

Kshetra Samachara

09/10/2020 07:06 pm

Cinque Terre

7.23 K

Cinque Terre

0

ಸಂಬಂಧಿತ ಸುದ್ದಿ