ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಚುನಾವಣೆ ವೀಕ್ಷಕರಾಗಿ ಡಾ: ಶಾಲಿನಿ ರಜನೀಶ್ ನೇಮಕ

ಧಾರವಾಡ : ಕರ್ನಾಟಕ ವಿಧಾನ ಪರಿಷತ್‍ನ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಡೆಯುವ ಚುನಾವಣೆಗೆ ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ: ಶಾಲಿನಿ ರಜನೀಶ ಅವರನ್ನು ವೀಕ್ಷಕರನ್ನಾಗಿ ಚುನಾವಣೆ ಆಯೋಗ ನೇಮಿಸಿದೆ.

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸಾರ್ವಜನಿಕರು ಈ ಚುನಾವಣೆಗೆ ಸಂಬಂಧಿಸಿದ ಅಹವಾಲುಗಳನ್ನು ಸಲ್ಲಿಸಲು ದೂರವಾಣಿ ಸಂಖ್ಯೆ : 0836-244556 ಅಥವಾ ಮೊಬೈಲ್ ಸಂಖ್ಯೆ 94498 47645 ಮೂಲಕ ವೀಕ್ಷಕರನ್ನು ಸಂಪರ್ಕಿಸಬಹುದು ಎಂದು ಚುನಾವಣಾಧಿಕಾರಿಗಳು ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

09/10/2020 07:08 pm

Cinque Terre

7.81 K

Cinque Terre

0

ಸಂಬಂಧಿತ ಸುದ್ದಿ