ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಲವಡಿಯಲ್ಲಿ ಬಿತ್ತನೆ ಬೀಜ ವಿತರಣೆ ಮಾಡುವಂತೆ ಆಗ್ರಹಿಸಿ ರೈತರಿಂದ ರಸ್ತೆ ತಡೆ

ಅಣ್ಣಿಗೇರಿ : ತಾಲೂಕಿನ ಶಲವಡಿ ತುಪ್ಪದಕುರಹಟ್ಟಿ ಹಾಗೂ ನಾವಳ್ಳಿ ಗ್ರಾಮಗಳಲ್ಲಿ ಕೃಷಿ ಬಿತ್ತನೆ ಬೀಜಗಳನ್ನು ವಿತರಣೆ ಮಾಡುವಂತೆ ಆಯಾ ಗ್ರಾಮಗಳ ರೈತರು ಶುಕ್ರವಾರ ಸ್ಥಳೀಯ ರೈತ ಸಂಪರ್ಕ ಕೇಂದ್ರ ಮುಂಭಾಗದಲ್ಲಿ ಕೆಲಕಾಲ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಿದರು.

ಈ ಮೊದಲು ಶಲವಡಿ ಹಾಗೂ ನಾವಳ್ಳಿ ಗ್ರಾಮಗಳಲ್ಲಿ ಸರ್ಕಾರದಿಂದ ನೇರವಾಗಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುತ್ತಿತ್ತು.

ಪ್ರಸಕ್ತ ಸಾಲಿನಲ್ಲಿ ಬೀಜಗಳ ವಿತರಣೆಯನ್ನು ಸ್ಥಗಿತಗೊಳಿಸಿದೆಇದರಿಂದ ರೈತರಿಗೆ ತುಂಬಾ ಅನಾನುಕೂಲವಾಗಿದೆ ಎಂದು ಗ್ರಾಮದ ರೈತರು ಸರ್ಕಾರದ ವಿರುದ್ಧ ಆರೋಪಿಸಿದರು.

ನಮ್ಮ ಗ್ರಾಮದಿಂದ ಬಿತ್ತನೆ ಬೀಜಗಳನ್ನು ಪಡೆಯಲು ನಮ್ಮೂರಿನಿಂದ ಅಣ್ಣಿಗೇರಿ ಕೇಂದ್ರಕ್ಕೆ ಬರಲು ಸಮರ್ಪಕವಾಗಿ ಬಸ್ ಸೌಲಭ್ಯ ಇಲ್ಲಾ ಎಂದು ಕೆಲ ರೈತರು ತಿಳಿಸಿದರು.

ಪ್ರತಿಭಟನಾ ಸ್ಥಳಕ್ಕೆ ತಹಶಿಲ್ದಾರ ಕೋಟ್ರೇಶ ಗಾಳಿ ಹಾಗೂ ಪಿಎಸ್ ಐ ಲಾಲಸಾಬ ಜೂಲಕಟ್ಟಿ ಬೇಟಿ ನೀಡಿ ನಿಮ್ಮ ಗ್ರಾಮಗಳಲ್ಲಿ ಬಿತ್ತನೆ ಬೀಜಗಳನ್ನು ವಿತರಣೆ ಮಾಡುವ ಕುರಿತು ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಿ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದರು.

Edited By : Nirmala Aralikatti
Kshetra Samachara

Kshetra Samachara

09/10/2020 10:06 pm

Cinque Terre

12.95 K

Cinque Terre

0

ಸಂಬಂಧಿತ ಸುದ್ದಿ