ಧಾರವಾಡ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುಶೀಲಾ.ಬಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ವರ್ಗಾವಣೆಗೊಂಡಿರುವ ಡಾ.ಬಿ.ಸಿ.ಸತೀಶ್ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ.
ಹೈದರಾಬಾದ್‌ನ ಗಾಂಧಿ ಮೆಡಿಕಲ್ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದಿರುವ ಡಾ.ಸುಶೀಲಾ ಅವರು, ಕೆಲಕಾಲ ವೈದ್ಯಕೀಯ ವೃತ್ತಿ ನಿರ್ವಹಿಸಿದರು. ನಂತರ 2013ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಭಾರತೀಯ ರೇಲ್ವೆ ಸಿಬ್ಬಂದಿ ಸೇವೆ (IRPS)ಗೆ ಅರ್ಹತೆ ಪಡೆದರು. ಪುನಃ 2015ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಭಾರತೀಯ ಆಡಳಿತ ಸೇವೆ (ಐಎಎಸ್) ಕರ್ನಾಟಕ ಕೇಡರ್‌ಗೆ ಆಯ್ಕೆಯಾದರು. ರಾಯಚೂರಿನಲ್ಲಿ ಜಿಲ್ಲಾ ತರಬೇತಿ, ಸೇಡಂ ಹಾಗೂ ಕಲಬುರ್ಗಿಯಲ್ಲಿ ಉಪವಿಭಾಗಾಧಿಕಾರಿಯಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಇದೀಗ ಬಡ್ತಿಯೊಂದಿಗೆ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಹುದ್ದೆ ಸ್ವೀಕರಿಸಿದ್ದಾರೆ.
Kshetra Samachara
10/10/2020 12:09 pm