ಕುಂದಗೋಳ : ಮತಕ್ಷೇತ್ರದ ವ್ಯಾಪ್ತಿಯ ಹಳ್ಳಿಗಳಲ್ಲಿ ರೈತರು ಜಮೀನುಗಳಲ್ಲಿ ಬೆಳೆದ ಶೇಂಗಾ ಬೆಳೆಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗದೆ ಸದ್ಯ ಶೇಖರಿಸಿ ತಮ್ಮ ಮನೆಯಲ್ಲಿ ಇಟ್ಟುಕೊಂಡಿದ್ದು ಕುಂದಗೋಳ ಪಟ್ಟಣ ಸೇರಿದಂತೆ ಯರಗುಪ್ಪಿ, ಸಂಶಿ, ಗುಡಗೇರಿ, ಯಲಿವಾಳ, ಕುಬಿಹಾಳ, ಕೂಡಲೇ ಶೇಂಗಾ ಖರೀದಿ ಕೇಂದ್ರ ತೆರೆಯುವಂತೆ ಜಿಲ್ಲಾಧಿಕಾರಿಗಳಿಗೆ ಶಾಸಕಿ ಕುಸುಮಾವತಿ ಶಿವಳ್ಳಿಯವರು ಮನವಿ ನೀಡಿದರು.
ಈ ಸಂದರ್ಭದಲ್ಲಿ ಕುಂದಗೋಳ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅರವಿಂದ ಕಟಗಿ, ಹಾಗೂ ಸುರೇಶ್ ಗಂಗಾಯಿ, ಜಿಪಂ ಸದಸ್ಯ ಉಮೇಶ ಹೆಬಸೂರ ಹಾಗೂ ಇತರರು ಉಪಸ್ಥಿತರಿದ್ದರು.
Kshetra Samachara
13/10/2020 06:25 pm