ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ

ಧಾರವಾಡ :ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಅಕ್ಟೋಬರ್ 18 ರಂದು ಬೆಳಿಗ್ಗೆ 11 ರಿಂದ 12-30 ಗಂಟೆಯವರೆಗೆ ಧಾರವಾಡ ನಗರದ ವಿವಿಧ 14 ಶಾಲಾ, ಕಾಲೇಜುಗಳಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯು ನಡೆಸಲಾಗುತ್ತಿದೆ.

ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಎರಡು (2) ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಹಾಗೂ ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಅಭ್ಯರ್ಥಿಗಳು ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಹಾಗೂ ಕುಡಿಯುವ ನೀರನ್ನು ತಮ್ಮ ಸಂಗಡ ತೆಗೆದುಕೊಂಡು ಬರುವುದನ್ನು ಕಡ್ಡಾಯಗೊಳಿಸಲಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಕರೆ ಪತ್ರವನ್ನು ಪೊಲೀಸ್ ಅಂತರ್ಜಾಲ www.ksp.gov.in ದಲ್ಲಿ ಪಡೆದುಕೊಳ್ಳುವಂತೆ ಮತ್ತು ಕರೆಪತ್ರದಲ್ಲಿ ಸೂಚಿಸಿದ ಸೂಚನೆಗಳನ್ನು ಪಾಲನೆ ಮಾಡುವಂತೆ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

13/10/2020 10:14 pm

Cinque Terre

9.85 K

Cinque Terre

0

ಸಂಬಂಧಿತ ಸುದ್ದಿ