ಧಾರವಾಡ: ಅತ್ಯಾಚಾರಿಗಳ ಮರ್ಮಾಂಗ ಕತ್ತರಿಸಬೇಕು ಎಂದು ಬಾಗಲಕೋಟೆಯ ಕೂಡಲ ಸಂಗಮ ಧರ್ಮಪೀಠದ ಶ್ರೀ ಬಸವ ಪ್ರಕಾಶ ಸ್ವಾಮೀಜಿ ಒತ್ತಾಯಿಸಿದ್ದಾರೆ.
ಮಾಗಡಿ ತಾಲೂಕಿನ ಅತ್ಯಾಚಾರ ಪ್ರಕರಣದ ಬಗ್ಗೆ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ ಶ್ರೀಗಳು, ಆರೋಪಿಗಳನ್ನು ಪೊಲೀಸರು ಬಂಧಿಸುವುದು, ಜಾಮೀನು ಕೊಡವುದು ಆಗಬಾರದು. ಅತ್ಯಾಚಾರಿಗಳ ಮರ್ಮಾಂಗ ಕತ್ತರಿಸುವ ಕಾನೂನು ಬರಬೇಕು. ಹೀಗೆ ಮಾಡಿದರೆ ಮಾತ್ರ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗುತ್ತವೆ ಎಂದು ಹೇಳಿದರು.
ಹೆಣ್ಣು ಮಕ್ಕಳು ಉಡುಗೆ ತೊಡುಗೆ ಬಗ್ಗೆಯೂ ಕಾಳಜಿ ವಹಿಸಬೇಕು. ರಾಣಿ ಚನ್ನಮ್ಮ, ಬೆಳವಡಿ ಮಲ್ಲಮ್ಮ ತಲೆ ಮೇಲೆ ಸೆರಗು ಹಾಕಿಕೊಂಡು ಯುದ್ಧ ಮಾಡಿದ್ದಾರೆ. ಆದರೆ ಇಂದು ಕೆಲ ಯುವತಿಯರು ತುಂಡು ಬಟ್ಟೆ ಹಾಕಿಕೊಂಡು ಕುಣಿಯುತ್ತಾರೆ. ಇದರಿಂದ ಪುರುಷರ ಮನುಷ್ಯ ಪ್ರಚೋದನೆಗೊಳಗಾಗಿ ಕೆಲ ಸಂದರ್ಭಗಳಲ್ಲಿ ಅತ್ಯಾಚಾರ ಆಗುತ್ತಿವೆ ಎಂದರು.
Kshetra Samachara
15/10/2020 04:14 pm