ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್-19 ವಿಶೇಷ ಜನಾಂದೋಲನ ಅಭಿಯಾನ

ಧಾರವಾಡ: ಕೋವಿಡ್-19 ವಿಶೇಷ ಜನಾಂದೋಲನ ಅಭಿಯಾನವನ್ನು ಜಿಲ್ಲಾ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಇಂದು ಆಚರಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ ಅವರು ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಒಬ್ಬರಿಂದ ಒಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಾಗಿರುವ ಕೊರೊನಾವನ್ನು ಪದೇ ಪದೇ ಕೈ ತೊಳೆಯುವುದು, ಮಾಸ್ಕ್ ಧರಿಸುವುದು ಹಾಗೂ ಶಾರೀರಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾತ್ರ ಕೋವಿಡ್ ಹರಡುವಿಕೆ ತಡೆಗಟ್ಟಲು ಸದ್ಯಕ್ಕೆ ನಮಗಿರುವ ಅಸ್ತ್ರವಾಗಿದೆ. ಕೋವಿಡ್ ನಿಯಂತ್ರಣ ಜಾಗೃತಿಗಾಗಿ ಸರಕಾರ ಮತ್ತು ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸಿ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್.ಪಾತ್ರೋಟ ಮಾತನಾಡಿದರು. ಈ ವೇಳೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿಕಲಾ ಬಿ. ನಿಂಬಣ್ಣವರ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.

Edited By : Vijay Kumar
Kshetra Samachara

Kshetra Samachara

16/10/2020 07:24 pm

Cinque Terre

14.61 K

Cinque Terre

1

ಸಂಬಂಧಿತ ಸುದ್ದಿ